ಬಂಟ್ವಾಳ ; ಬೃಹತ್ ಅಂತರಾಜ್ಯ ವಾಹನ ಹಾಗೂ ಅಡಿಕೆ ಕಳ್ಳರ ಜಾಲವೊಂದನ್ನು ಬೇಧಿಸಿರುವ ಬಂಟ್ವಾಳ ಹಾಗೂ ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರ ತಂಡ ಐವರು ಆರೋಪಿಗಳನ್ನು ಬಂಧಿಸಿದ್ದು, 5 ಕಾರು, ಒಂದು ಬೈಕ್ ಸಹಿತ 20 ಗೋಣಿ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಉಮ್ಮರ ಫಾರೂಕ್, ಅಖ್ತರ್, ಇಮ್ರಾನ್, ಮುಕ್ಸಿಂ ಹಾಗೂ ಶಿಫಾನ್ ಎಂದು ಗುರುತಿಸಲಾಗಿದೆ.
ಆರೋಪಿಗಳು ಬಂಟ್ವಾಳ ನಗರ, ಗ್ರಾಮಾಂತರ, ವಿಟ್ಲ ಹಾಗೂ ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ವಿವಿಧ ಕಳವು ಪ್ರಕರರಣಗಳನ್ನು ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಬಂಟ್ವಾಳ ಎಎಸ್ಪಿ ರಾಹುಲ್ ಕುಮಾರ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಬೆಳ್ಳಿಯಪ್ಪ ನೇತೃತ್ವದ ಪೊಲೀಸರ ತಂಡ ಈ ಕಾಯರ್ಾಚರಣೆ ನಡೆಸಿದೆ, ಜಿಲ್ಲಾ ಅಪರಾಧ ಪತ್ತೆ ದಳದ ಪೊಲೀಸರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.
