ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸೊಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ಇತ್ತೀಚೆಗೆ ಉಚಿತ ಫ್ಯಾನ್ ವಿತರಿಸಿದರು. ಪಕ್ಷದ ಕ್ಷೇತ್ರಾಧ್ಯಕ್ಷ ಶಾಹುಲ್ ಹಮೀದ್, ಪಕ್ಷದ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೊಡಾಜೆ ಮತ್ತಿತರರು ಮಾತನಾಡಿದರು.
ಪಕ್ಷದ ತಾಲ್ಲೂಕು ಅಧ್ಯಕ್ಷ ಝಕರಿಯಾ ಗೋಳ್ತಮಜಲು, ಜಿಲ್ಲಾ ಕಾರ್ಯದರ್ಶಿಗಳಾದ ರಿಯಾಝ್ ಫರಂಗಿಪೇಟೆ ಮತ್ತು ಅನ್ವರ್ ಸಾದತ್ ಬಜೆತ್ತೂರು ಶುಭ ಹಾರೈಸಿದರು. ಜಿಲ್ಲಾ ಸಮಿತಿ ಸದಸ್ಯರಾದ ಮಹಮ್ಮದ್ ಇಕ್ಬಾಲ್, ಯೂಸುಫ್ ಆಲಡ್ಕ, ಕಾರ್ಯದರ್ಶಿ ಮೂನಿಷ್ ಅಲಿ ಉಪಸ್ಥಿತರಿದ್ದರು.
ಕ್ಷೇತ್ರ ಜೊತೆ ಕಾರ್ಯದರ್ಶಿ ಸತ್ತಾರ್ ಕಲ್ಲಡ್ಕ ಸ್ವಾಗತಿಸಿ, ಇಬ್ರಾಹಿಂ ಖಲೀಲ್ ವಂದಿಸಿದರು. ಇಬ್ರಾಹಿಂ ನವಾಝ್ ಬಡಕಬೈಲು ಕಾರ್ಯಕ್ರಮ ನಿರೂಪಿಸಿದರು.
