ಉಳ್ಳಾಲ: ತೊಕ್ಕೊಟ್ಟು ಓವರ್‍ಬ್ರಿಡ್ಜ್ ಬಸ್ ನಿಲ್ದಾಣದ ಬಳಿ ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 60ರ ಹರೆಯದ ವ್ಯಕ್ತಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ವಾರೀಸುದಾರರಿದ್ದಲ್ಲಿ ಉಳ್ಳಾಲ ಪೊಲೀಸರನ್ನು ಸಂಪಕಿಸಲು ಕೋರಲಾಗಿದೆ.ಎ.15ರಂದು ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಸ್ ನಿಲ್ದಾಣದ ಬಳಿ ಅಸ್ವಸ್ಥನಾಗಿ ಬಿದ್ದವರನ್ನು ಸಾರ್ವಜನಿಕರು 108 ಆಂಬ್ಯುಲೆನ್ಸ್ ಮೂಲಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಸಂಬಂಧಿಕರಿದ್ದಲ್ಲಿ ಉಳ್ಳಾಲ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.

