ಬಂಟ್ವಾಳ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.
ಕಾವಳಪಡೂರು ಗ್ರಾಮದ ವಗ್ಗ ಎಂಬಲ್ಲಿನ ನಿವಾಸಿ ಜಯೇಂದ್ರ ರಾವ್ (48)ಮೃತಪಟ್ಟವರು.ಅವರು ವಗ್ಗ ,ಕಾರಿಂಜ ಕ್ರಾಸ್ ನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು.ಎ.23 ರಂದು ವಗ್ಗದಲ್ಲಿ ಅವರ ಬೈಕ್ ಹಾಗೂ ಇಂಡಿಕಾ ಕಾರಿನ ನಡುವೆ ಅಪಘಾತ ಉಂಟಾಗಿತ್ತು.ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.ಒಂದು ವಾರಗಳ ಕಾಲ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತರು ಪತ್ನಿ,ಪುತ್ರರನ್ನು ಅಗಲಿದ್ದಾರೆ.ನಾಲ್ಕು ವರ್ಷಗಳ ಹಿಂದೆ ಅವರ ಎಳೆ ವಯಸ್ಸಿನ ಪುತ್ರಿಯರಿಬ್ಬರು ಮನೆ ಪಕ್ಕದ ಕೆರೆಗೆ ಬಿದ್ದು ಮೃತಪಟ್ಟಿದ್ದರು.

By Suddi9

Leave a Reply

Your email address will not be published. Required fields are marked *