ಬಂಟ್ವಾಳ : ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಅಪಘಾತ ನಡೆದ ಪರಿಣಾಮ ಕೆಲ ಹೊತ್ತು ಹೆದ್ದಾರಿ ಸಂಚಾರ ವ್ಯತ್ಯಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ-75 ರ ಪಾಣೆಮಂಗಳೂರು ಕಲ್ಲುರ್ಟಿ ಗುಡಿ ಸಮೀಪ ಶನಿವಾರ ರಾತ್ರಿ ನಡೆದಿದೆ.
02 May Paner Accident 1

02 May Paner Accident 2
ಸ್ಥಳೀಯ ನಿವಾಸಿ ಯುವಕನೋರ್ವ ತನ್ನ ಮಾರುತಿ ಕಾರಿನಲ್ಲಿ ಪಾಣೆಮಂಗಳೂರು ಹಳೆ ಹೆದ್ದಾರಿಯಿಂದ ಹೊಸ ಹೆದ್ದಾರಿಗೆ ಪ್ರವೇಶ ಪಡೆಯುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
ಘಟನೆಯಿಂದ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ನೆಹರುನಗರ ನಿವಾಸಿ ರಿಝ್ವಾನ್ ಪವಾಡ ಸದೃಶ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾನೆ. ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯ ಸಾರ್ವಜನಿಕರು ಅಪಘಾತಕ್ಕೀಡಾದ ಎರಡೂ ವಾಹನಗಳನ್ನು ಬದಿಗೆ ಸರಿಸಿ ಹೆದ್ದಾರಿ ಸಂಚಾರ ಸುಗಮಗೊಳಿಸಿದರು.

By Suddi9

Leave a Reply

Your email address will not be published. Required fields are marked *