ಮಂಗಳೂರು: ಅಗ್ರಿಗೋಲ್ಡ್ ಫಾರ್ಮ್ ಇಂಡಿಯಾ ಸಂಸ್ಥೆ ಸಾವಿರಾರು ಗ್ರಾಹಕರಿಂದ ಹಣ ಸಂಗ್ರಹಿಸಿ ಬಳಿಕ ಗ್ರಾಹಕರಿಗೆ ನೀಡದೆ ವಂಚಿಸಿರುವುದಾಗಿ ಆರೋಪಿಸಿ ಅಗ್ರಿ ಗೋಲ್ಡ್ ಗ್ರಾಹಕರು ಮತ್ತು ಪ್ರತಿನಿಧಿಗಳ ಹಿತ ರಕ್ಷಣಾ ಸಮಿತಿ ವತಿಯಿಂದ ಭಾರತೀಯ ಮಜ್ದೂರ್ ಸಂಘದ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
Scan
ಅಗ್ರಿಗೋಲ್ಡ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೇರಿ ಪ್ರತಿಭಟನಾ ಸಭೆ ನಡೆಸಲಾಯಿತು. ಬಳಿಕ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸಲ್ಲಿಸಲಾಯಿತು. ಕಳೆದ ಆರು ತಿಂಗಳುಗಳಿಂದ ಅಗ್ರಿಗೋಲ್ಡ್ ಸಂಸ್ಥೆ ವ್ಯವಹಾರ ಸ್ಥಗಿತಗೊಳಿಸಿದೆ. ಸಂಸ್ಥೆಯಲ್ಲಿ ಹೂಡಿಕೆ ಮಾಡಿದ ಗ್ರಾಹಕರಿಗೆ ಅವರ ಹಣ ಮರುಪಾವತಿ ಆಗುತ್ತಿಲ್ಲ ಇವರ ಜತೆಯಲ್ಲಿ ಹಣ ಹೂಡುವಂತೆ ನಂಬಿಸಿದ ಪ್ರತಿನಿಧಿಗಳು ಕೂಡಾ ಸಂಕಷ್ಟಕ್ಕೆ ಸಿಲುಕಿದ್ದಾರೆ.

By Suddi9

Leave a Reply

Your email address will not be published. Required fields are marked *