ಬೆಂಗಳೂರು : ಮಹತ್ವದ ಗ್ರಾಮ ಪಂಚಾಯಿತಿ ಚುನಾವಣೆಗೆ ದಿನಾಂಕ ಪ್ರಕಟವಾಗಿದೆ. ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದೆ. ಮೇ 29ರಂದು ಮೊದಲ ಹಂತದ ಗ್ರಾ.ಪಂ. ಚುನಾವಣೆ ನಡೆಯಲಿದ್ದು, ಜೂನ್​2ರಂದು ಎರಡನೇ ಹಂತದಲ್ಲಿ ನಡೆಯಲಿದೆ. ಜೂನ್ 5ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಮೇ 10ರಿಂದ ಜೂನ್ 7ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
download (1)
ಒಟ್ಟು 5,844 ಗ್ರಾಮ ಪಂಚಾಯಿತಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯುಕ್ತ ಪಿ.ಎನ್​. ಶ್ರೀನಿವಾಸಾಚಾರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮೊದಲಹಂತದ ಚುಣಾವಣೆಯು ಮೇ 29ರಂದು ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ, ಬೆಳಗಾವಿ, ವಿಜಯಪುರ, ಹಾವೇರಿ, ಬಾಗಲಕೋಟೆ, ಉತ್ತರ ಕನ್ನಡ, ಧಾರವಾಡ, ಗದಗನಲ್ಲಿ ಚುನಾವಣೆ ನಡೆಯಲಿದೆ.ಎರಡನೇ ಹಂತದ ಚುಣಾವಣೆ ಜೂ.2ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಬೀದರ್​, ಬಳ್ಳಾರಿ, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ.

By suddi9

Leave a Reply

Your email address will not be published. Required fields are marked *