ಬಂಟ್ವಾಳ:  ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಮೆಡಿಕಲ್ ಟ್ರಸ್ಟ್ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಇದೇ 7ರಂದು ಬೆಳಿಗ್ಗೆ ಇಲ್ಲಿನ ಸರ್ಕಾರಿ ಪ್ರಾಥಮಿಕ ಶಾಲಾ ಬಳಿ ಸಂಚಾರಿ ಉಚಿತ ಚಿಕಿತ್ಸಾ ಶಿಬಿರ ನಡೆಯಲಿದೆ.
ಕಾರಿಂಜ ಕ್ಷೇತ್ರದ ಮಾಜಿ ಆಡಳಿತ ಧರ್ಮದರ್ಶಿ ಪಿ.ಜಿನರಾಜ ಆರಿಗ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾವಳಪಡೂರು ಗ್ರಾ.ಪಂ.ಅಧ್ಯಕ್ಷ ಅಬ್ದುಲ್ ರಜಾಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಮುಂದಿನ ದಿನಗಳಲ್ಲಿ ಪ್ರತೀ ಮೂರು ದಿನಗಳಿಗೊಮ್ಮ ಶಿಬಿರವು ನಡೆಯಲಿದೆ .

By Suddi9

Leave a Reply

Your email address will not be published. Required fields are marked *