ಬಂಟ್ವಾಳ ತಾಲ್ಲೂಕಿನ ವಕೀಲರ ಸಂಘಕ್ಕೆ ಮಲೈಕಾ ಸಂಸ್ಥೆ ವತಿಯಿಂದ ಕೊಡುಗೆಯಾಗಿ ನೀಡಿದ ಕುಡಿಯುವ ನೀರಿನ ಶುದ್ಧೀಕರಣ ಯಂತ್ರವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶ ಜಯಪ್ರಕಾಶ್ ಡಿ.ಆರ್. ಅವರು ಸೋಮವಾರ ಉದ್ಘಾಟಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರಾದ ಚಂದ್ರಶೇಖರ ಯು., ಎರ್ಮಾಳ್ ಕಲ್ಪನಾ , ವಿನುತಾ ಜಯಪ್ರಕಾಶ್, ಮಹೇಶ್ ಆರ್., ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಸ್.ಪಿ.ಚೆಂಗಪ್ಪ, ಬಂಟ್ವಾಳ ವಕೀಲರ ಸಂಘದ ಅಧ್ಯಕ್ಷ ಚಂದ್ರಶೇಖರ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
