ಬಂಟ್ವಾಳ: ತಾಲ್ಲೂಕಿನ ಸರಪಾಡಿ ಸಮೀಪದ ಅಜಿಲಮೊಗರು ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಗೆ ತಹಶೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದ ಕಂದಾಯ ಇಲಾಖೆ ಅಧಿಕಾರಿಗಳು ಸೋಮವಾರ ಸಂಜೆ ದಾಳಿ ನಡೆಸಿ ಡ್ರೆಜ್ಜಿಂಗ್ ಯಂತ್ರ ವಶಪಡಿಸಿಕೊಂಡಿದ್ದಾರೆ. ಮಂಗಳೂರು ಉಪವಿಭಾಗಾಧಿಕಾರಿ ಡಾ.ಅಶೋಕ್ ನಿರ್ದೇಶನದಂತೆ ದಾಳಿ ನಡೆಸಲಾಗಿದ್ದು, ಮಂಗಳವಾರ ಮತ್ತೆ ಕಾರ್ಯಚರಣೆ ನಡೆಸಿ ಪಾಣೆಮಂಗಳೂರು ಪರಿಸರದಲ್ಲಿ ಅಕ್ರಮ ಮರಳು ಸಾಗಾಟದ ಎರಡು ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.

12btl-Drejjing
ಸರಪಾಡಿಯಲ್ಲಿ ದಾಳಿ ಬಗ್ಗೆ ಮಾಹಿತಿ ಪಡೆದ ಮರಳುಗಾರರು ಲಾರಿಗಳ ಸಹಿತ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕಾರ್ಯ ಚರಣೆಯಲ್ಲಿ ಕಂದಾಯ ನಿರೀಕ್ಷಕರಾದ ಸಾಧು, ನಾರಾಯಣ ಪೂಜಾರಿ, ಗ್ರಾಮಕರಣಿಕ ಎ.ಪಿ.ಭಟ್, ಶಿವಪ್ಪ, ಬಾಬು, ಯೋಗಾನಂದ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಮೂರ್ತಿ  ಹಾಗೂ ನಗರ ಠಾಣೆ ಪೊಲೀಸರು ಪಾಲ್ಗೊಂಡಿದ್ದರು.

By Suddi9

Leave a Reply

Your email address will not be published. Required fields are marked *