ಬಂಟ್ವಾಳ : ಕಲಾಬಾಗಿಲು ಬುರೂಜ್ ಆಂಗ್ಲ ಮಾಧ್ಯಮ ಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ದಾಖಲಿಸಿದೆ. ಒಟ್ಟು 27 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 12 ಮಂದಿ ಡಿಸ್ಟಿಂಕ್ಷನ್ ಹಾಗೂ 13 ಮಂದಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಶಾಲಾ ವಿದ್ಯಾರ್ಥಿನಿ ದಿಲ್ಶಾದ್ 565 (90%) ಅಂಕ ಗಳಿಸಿದ್ದಾಳೆ.
