ಮೂಡುಬಿದರೆ: ಮಹಾವೀರ ಪದವಿ ಪೂರ್ವ ಕಾಲೇಜಿನಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಶೇ.80ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಹಾಗೂ ಶೇ.90ಕ್ಕಿಂತ ಹೆಚ್ಚ ಅಂಕ ಗಳಿಸಿದವರಿಗೆ ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಉಚಿತ ಪ್ರವೇಶ ನೀಡಲಾಗುವುದು. ಹಾಗೂ ಮಹಾವೀರ ಪದವಿ ಕಾಲೇಜಿನಲ್ಲಿ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ಉಚಿತ ಪ್ರವೇಶ ಕಲ್ಪಿಸಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಮಹಾವೀರ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಸಿ.ಎಂ.ಬಿ, ಪಿ.ಸಿ.ಎಂ.ಎಸ್, ಪಿ.ಸಿ.ಎಂ.ಸಿ ಎಸ್, ವಾಣಿಜ್ಯ ಶಾಸ್ತ್ರ (ಕಂಪ್ಯೂಟರ್ ಸೈನ್ಸ್), ವಾಣಿಜ್ಯ ಶಾಸ್ತ್ರ (ಸಾಮಾನ್ಯ) ಹಾಗೂ ಹೆಚ್.ಇ.ಪಿ.ಎಸ್ ಪದವಿ ಕಾಲೇಜಿನಲ್ಲಿ ಬಿ.ಎ (ಹೆಚ್.ಇ.ಪಿ) ಬಿ.ಎಸ್.ಸಿ (ಪಿ.ಸಿ.ಎಂ), ಬಿ.ಕಾಂ, ಬಿ.ಬಿ.ಎಂ, ಬಿ.ಸಿ.ಎ ಪದವಿಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭಗೊಂಡಿದೆ ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
