ಬಂಟ್ವಾಳ: ತಾಲ್ಲೂಕಿನ ಒಟ್ಟು 57 ಗ್ರಾಮ ಪಂಚಾಯಿತಿನ ಒಟ್ಟು 837 ಸ್ಥಾನಗಳಿಗೆ ಇದೇ 29ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಒಟ್ಟು 2,567 ಮಂದಿ ಅಭ್ಯರ್ಥಿಗಳ ಪೈಕಿ ಒಟ್ಟು 709 ಮಂದಿ ಗುರುವಾರ ನಾಮಪತ್ರ ಹಿಂತೆಗೆದುಕೊಂಡ ಪರಿಣಾಮ 34 ಮಂದಿ ಅವಿರೋಧ ಆಯ್ಕೆಯಾಗಿದ್ದಾರೆ.

ಇದರಿಂದಾಗಿ ಒಟ್ಟು 803 ಸ್ಥಾನಗಳಿಗೆ ಅಂತಿಮವಾಗಿ ಒಟ್ಟು 1,824 ಮಂದಿ ಚುನಾವಣಾ ಕಣದಲ್ಲಿ ಉಳಿದಿದ್ದಾರೆ.
