ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಇಲ್ಲಿ ದಿನಾಂಕ 01-06-2015 ರಂದು ಶಾಲಾ ಪ್ರಾರಂಭೋತ್ಸವ ವನ್ನು ಅಕ್ಷರ ತೇರು ಮೆರವಣಿಗೆಯಲ್ಲಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವ ಮೂಲಕ ಆಚರಿಸಲಾಯಿತು. ಉದಯವಾಣಿ ದಿನಪತ್ರಿಕೆಯ ವರದಿಗಾರರಾದ ರಾಜಾ ಬಂಟ್ವಾಳ ಇವರು ಬ್ಯಾಂಡ್ ಬಡಿಯುವುದರ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು
.

ಬಣ್ಣ ಬಣ್ಣದ ಕೊಡೆಗಳು ಹಾಗೂ ಗೊಂಬೆ ನರ್ತನದೊಂದಿಗೆ ವಿವಿಧ ಘೋಷಣೆಗಳನ್ನು ಕೂಗುತ್ತಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿಂದ ಶಂಭೂರು ಪ್ರೌಢಶಾಲೆಯವರೆಗೆ ಮೆರವಣಿಗೆಯಲ್ಲಿ ಶಾಲಾ ವಿದ್ಯಾರ್ಥಿಗಳು , ಪೋಷಕರು, ಎಸ್.ಡಿ.ಎಂ.ಸಿ ಸದಸ್ಯರು, ಶಿಕ್ಷಕರು ಭಾಗವಹಿಸಿದ್ದರು. ಶಾಲಾ ದತ್ತು ಸಮಿತಿ ಅಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿ, ನಾಟಿ ಕೃಷ್ಣರಾಜ ಶೆಟ್ಟಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ನಾರಾಯಣ ಗೌಡ, ಆನಂದ ಸಾಲಿಯಾನ್ ಮುಂತಾದವರು ಉಪಸ್ಥಿತರಿದ್ದರು. ಶಾಲಾ ಪ್ರವೇಶ ದ್ವಾರದಲ್ಲಿ ಹೊಸದಾಗಿ ಸೇರ್ಪಡೆಯಾದ ವಿದ್ಯಾಥರ್ಿಗಳಿಗೆ ಆರತಿ ಬೆಳಗಿಸಿ ಬರಮಾಡಿಕೊಳ್ಳಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಲೆಯ ವಿವಿಧ ಮಾಹಿತಿಗಳನ್ನು ನೀಡುವುದರ ಜೊತೆಗೆ ಉಚಿತ ಪಠ್ಯ ಪುಸ್ತಕವನ್ನು ವಿತರಿಸಲಾಯಿತು.

By Suddi9

Leave a Reply

Your email address will not be published. Required fields are marked *