ಬಂಟ್ವಾಳ:ತಾಲ್ಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಪುತ್ತಿಲ ಗ್ರಾಮದ ಕುಂಡಡ್ಕ ಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಬೈಕಿನಲ್ಲಿ ಬಂದಿದ್ದ ನಾಲ್ವರ ತಂಡವು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ಆರೋಪಿಗಳನ್ನು ಸ್ಥಳೀಯ ನಿವಾಸಿಗಳಾದ ಮುಸ್ತಾಫ, ಇಕ್ಕಾ, ಇಮ್ರಾನ್ ಮತ್ತು ನವಾಝ್ ಎಂದು ಗುರುತಿಸಲಾಗಿದ್ದು, ಇವರು ಸ್ಥಳೀಯ ನಿವಾಸಿ ಅಬ್ದುಲ್ ರಶೀದ್ ಎಂಬವರ ಸ್ಕಾರ್ಪಿಯೋ ಕಾರು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಲಾಗಿದೆ. ಇಲ್ಲಿನ ನಿವಾಸಿ ಹಮೀದ್ ಎಂಬವರ ಜಾಗ ಮಾರಾಟಕ್ಕೆ ಸಂಬಂಧಿಸಿದಂತೆ ರಶೀದ್ ಮೇಲೆ ಹಲ್ಲೆ ನಡೆಸಲಾಗಿದ್ದು, ಕಾರಿನ ಗಾಜು ಒಡೆದು ಹಾನಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

By Suddi9

Leave a Reply

Your email address will not be published. Required fields are marked *