ಬಂಟ್ವಾಳ : ಸಮಾಜ ಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡ ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ರೆಡ್ಡಿ ನಾಯ್ಕ ರವರನ್ನು ತಾಲೂಕು ಪಂಚಾಯತ್ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ತಾಲೂಕು ತಹಶೀಲ್ದಾರ್ ಪುರಂದರ ಹೆಗಡೆ ಸನ್ಮಾನಿಸಿದರು.

ನೂತನ ಸಮಾಜ ಕಲ್ಯಾಣಾಧಿಕಾರಿ ಮೋಹನ್ ಕುಮಾರ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯನ್ ಮಿರಾಂದ , ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಪಿ.ಗಿರೀಶ್ , ಮ್ಯಾನೇಜರ್ ನಾಗೇಶ್ , ಮಂಜು ವಿಟ್ಲ , ಇಲಾಖೆಯ ಸಿಬ್ಬಂದಿ ವರ್ಗ ಮತ್ತು ಮೇಲ್ವಿಚಾರಕರು ಉಪಸ್ಥಿತರಿದ್ದರು.
