ಭಜನೆಯಿಂದ ಸಮಾಜ ಹಾಗೂ ಕುಟುಂಬಗಳಲ್ಲಿ ವಿಭಜನೆ ತಪ್ಪುವುದು. ಮನಶ್ಯಾಂತಿಯೂ ಸಿದ್ಧಿಸುವುದು ಎಡಪದವಿನಲ್ಲಿ ಶ್ರೀ ರಾಮ ಮಂದಿರ ನಿರ್ಮಾಣದ ಬಾಕಿ ಕಾಮಗಾರಿಗಳಿಗೆ ಸಂಸದರ ನಿಯಿಂದ ರೂ. 10 ಲಕ್ಷ ಅನುದಾನ ಬಿಡುಗಡೆ ಮಾಡುವುದಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಎಡಪದವು ಶ್ರೀ ರಾಮ ಮಂದಿರದಲ್ಲಿ ಶ್ರೀ ಪಟ್ಟಾಭಿರಾಮಚಂದ್ರ ದೇವರ ಬ್ರಹ್ಮಕಲಶಾಭಿಷೇಕ ಮಹೋತ್ಸವ ಪ್ರಯುಕ್ತ ಗುರುವಾರ ಜರಗಿದ ಧಾರ್ಮಿಕ ಸಭೆಯಲ್ಲಿ ಅವರು ಮಾತನಾಡಿದರು.

ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾದೀಶ ತೀರ್ಥ ಸ್ವಾಮೀಜಿ ಬ್ರಹ್ಮಕಲಸ ನೆರವೇರಿಸಿ ಅನುಗ್ರಹ ಸಂದೇಶ ನೀಡಿದರು.
ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಅವರು ಆಶೀರ್ವಚನದಲ್ಲಿ *ನಿಸ್ವಾರ್ಥ ಭಕುತಿಗೆ ಭಗವಂತ ಒಲಿಯುತ್ತಾನೆ, ಎಡಪದವಿನ ರಾಮ ಮಂದಿರ ದೇಶದ ಏಳಿಗೆ ಶಾಂತಿಯ ಸಂಕೆೇತವೂ ಆಗಬಹುದು* ಎಂದರು. ಇದೇ ಸಂದರ್ಭ ಮಂದಿರದ ಏಳಿಗೆಗಾಗಿ ಅಂದಿನಿಂದ ಇಂದಿನವರೆಗೂ ಶ್ರಮಿಸಿದ ಹಿರಿಯರನ್ನು ದಾನಿಗಳನ್ನು ಗೌರವಿಸಲಾಯಿತು.
ಮಾಜಿ ಸಚಿವ ಕೃಷ್ಣ ಜೆ. ಪಾಲಿಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಆಳ್ವಾಸ್ ಶಿಕ್ಷಣ್ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ, ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮರ್ ರೈ ಮಾಲಾಡಿ. ಶಾಸ್ತವು ಶ್ರೀ ಭೂತನಥೇಶ್ವರ ದೇವಳದ ಆಡಳಿತ ಮೊಕ್ತೇಸರ ವಿಜಯನಾಥ ವಿಠಲ ಶೆಟ್ಟಿ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ, ರಾಜೇಶ್ ನಾಕ್ ಉಳಿಪಾಡಿಗುತ್ತು, ಉದ್ಯಮಿ ಯಾದವ ಕೋಟ್ಯಾನ್, ಮಿಜಾರುಗುತ್ತು ಆನಂದ ಅಳ್ವ, ಪ್ರಗತಿಪರ ಕೃಷಿಕ ಎಂ. ಜೀವಂಧರ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಬಾಲಕ್ರಷ್ಣ ಅವರ ಪ್ರಾರ್ಥನೆಯೊಂದಿಗೆ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ಎನ್. ಮುರಳೀಧರ ಶೆಟ್ಟಿ ಸ್ವಾಗತಿಸಿದರು. ದಯಾನಂದ ಕತ್ತಲ್ಸಾರ್ ಕಾರ್ಯಕ್ರಮ ನಿರೂಪಿಸಿದರು.






