ಬಂಟ್ವಾಳ:ಬಂಟ್ವಾಳ ತಾಲ್ಲೂಕಿನ ಕಳ್ಳಿಗೆ ಗ್ರಾಮದ ಕನಪಡಿತ್ತಾಯ ದೈವಸ್ಥಾನ ಬಳಿ ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ವೇಳೆ ತೊಟದ ಕೆರೆಗೆ ಬಿದ್ದು ಕೂಲಿ ಕಾರ್ಮಿಕರೊಬ್ಬರು ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ಮೃತರನ್ನು ಸ್ಥಳೀಯ ನಿವಾಸಿ ವಾಸು ಪೂಜಾರಿ (48) ಎಂದು ಗುರುತಿಸಲಾಗಿದ್ದು, ಮೃತರಿಗೆ ಪತ್ನಿ, ಪುತ್ರ ಮತ್ತು ಪುತ್ರಿ ಇದ್ದಾರೆ.
ಇವರು ಶನಿವಾರ ಬೆಳಿಗ್ಗೆ ಎಂದಿನಂತೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಸ್ಥಳೀಯ ನಿವಾಸಿ ಲಿಯೋ ಡಿಸೋಜ ಎಂಬವರ ಕೆರಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
