ಬಂಟ್ವಾಳ: ತಾಲೂಕಿನ ಸಂಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಿದ್ಧಕಟ್ಟೆಯಲ್ಲಿ ಹೊಸತಾಗಿ ಪಶುಚಿಕಿತ್ಸಾಲಯ ತೆರೆಯಲು ಸರಕಾರವು ಮಂಜೂರಾತಿ ನೀಡಿದೆ ಎಂದು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.

ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯಲ್ಲಿ ತೆರೆಯಲಾಗುವ ಹೊಸ ಪಶು ಚಿಕಿತ್ಸಾಲಯಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಗೆ ಮಂಜೂರಾದ ಏಕೈಕ ಚಿಕಿತ್ಸಾಲಯವನ್ನು ಸಿದ್ದಕಟ್ಟೆಯಲ್ಲಿ ಆರಂಭಿಸಲಾಗುವುದು. ಬಂಟ್ವಾಳ ತಾಲೂಕಿನ ಮಂಚಿಯಲ್ಲಿರುವ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರವನ್ನು ಪಶು ಚಿಕಿತ್ಸಾಲಯವನ್ನಾಗಿ ಮೇಲ್ದರ್ಜೆಗೇರಿಸಲು ಕೂಡಾ ಸರಕಾರ ಮಂಜೂರಾತಿ ನೀಡಿದೆ ಎಂದು ಅವರು ತಿಳಿಸಿದ್ದಾರೆ.
