ಮಂಗಳೂರು: ಆನ್ಲೈನ್ ಆಧಾರಿತ ಟ್ಯಾಕ್ಸಿ ಸೇವೆಯನ್ನು ಒದಗಿಸುತ್ತಿರುವ ಒಲಾ ಕ್ಯಾಬ್ ವಿರುದ್ಧ ನಗರದ ಟ್ಯಾಕ್ಸಿ ಚಾಲಕ ಮತ್ತು ಮಾಲಕರ ಸಂಘ ಶುಕ್ರವಾರ ಜುಲೈ ಮೂರರಂದು ಪ್ರತಿಭಟನೆ ನಡೆಸಲು ಮುಂದಾಗಿದೆ.
ಐದಾರು ತಿಂಗಳುಗಳಿಂದ ನಗರ ದಲ್ಲಿ ಕಾರ್ಯಾಚರಿಸುತ್ತಿರುವ ಒಲಾ ಕ್ಯಾಬ್ ಹಲವಾರು ವರ್ಷಗಳಿಂದ ಟ್ಯಾಕ್ಸಿ ಉದ್ಯಮವನ್ನೇ ನಂಬಿ ಜೀವನ ನಡೆಸುತ್ತಿರುವ ಜನರು ಆನ್ಲೈನ್ ಆಧಾರಿತ ಟ್ಯಾಕ್ಸಿ ಸೇವೆಯ ಕಾರಣ ದಿಂದ ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದರ ವಿರುದ್ಧ ಬೃಹತ್ ಪ್ರತಿಭಟನೆ ನಡೆಸಲು ಉದ್ಧೇಶಿಸಿದ್ದು ಶುಕ್ರವಾರ ಬೆಳಿಗ್ಗೆ 9.30ರ ಸುಮಾರಿಗೆ ನಗರದ ಜ್ಯೋತಿ ವೃತ್ತದಿಂದ ನೆಹರೂ ಮೈದಾನದವರೆಗೆ ಟ್ಯಾಕ್ಸಿ ವಾಹನ ರ್ಯಾಲಿ ನಡೆಸಲಾಗುವುದು ನಂತರ ಜಿಲ್ಲಾಧಿಕಾರಿಯವರ ಕಚೇರಿಯ ಆವರಣದಲ್ಲಿ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಪ್ರತಿಭಟನೆಯ ನೇತೃತ್ವವನ್ನು ದ.ಕ ಟ್ಯಾಕ್ಸಿಮೆನ್ಸ್ ಆ್ಯಂಡ್ ಮ್ಯಾಕ್ಸಿಕ್ಯಾಬ್ ಎಸೋಸಿಯೇಶನ್ ವಹಿಸಿಕೊಳ್ಳಲಿದೆ.

