ಬಂಟ್ವಾಳ ತಾಲ್ಲೂಕಿನ ಕುಕ್ಕಾಜೆ ನಿವಾಸಿ, ಇಲ್ಲಿನ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಡಿ.ಕೆ. ಹಂಝ ಕುಕ್ಕಾಜೆ ಇವರನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರ ಶಿಫಾರಸ್ಸಿನಂತೆ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಎಂ.ಎಸ್.ಮುಹಮ್ಮದ್ ಈ ಬಗ್ಗೆ ಲಿಖಿತ ಆದೇಶ ನೀಡಿರುವುದಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
