ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಾಣೆಮಂಗಳೂರು ಸಮೀಪದ ಬೊಂಡಾಲ ಹೊಸಮನೆ ಎಂಬಲ್ಲಿ ಆವರಣಗೋಡೆ ಇಲ್ಲದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸ್ಥಳೀಯ ನಿವಾಸಿ ದೇರಣ್ಣ ಶೆಟ್ಟಿ(56) ಎಂಬವರು ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಬಿ.ಸಿ.ರೋಡ್ನ ಹೋಟೆಲೊಂದರಲ್ಲಿ ಎಂದಿನಂತೆ ಮಂಗಳವಾರ ರಾತ್ರಿ ಕೆಲಸ ಮುಗಿಸಿದ ಬಳಿಕ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.
