ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕಾವಳಮೂಡೂರು ಯುವಕ ಸಂಘದ ವತಿಯಿಂದ ಇದೇ 12ರಂದು ಬೆಳಿಗ್ಗೆ ಕಾವಳಮೂಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಸರ್ಕಾರಿ ಪ್ರೌಢಶಾಲೆ ಮೈದಾನದಲ್ಲಿ ‘ಗ್ರಾಮೀಣ ಕ್ರೀಡೋತ್ಸವ’ ಕಾರ್ಯಕ್ರಮ ನಡೆಯಲಿದೆ.
ಪುರುಷರಿಗೆ ಸಾಮೂಹಿಕ ರಸ್ತೆ ಓಟ, ಹಗ್ಗ-ಜಗ್ಗಾಟ, ಮಡಿಕೆ ಒಡೆಯುವುದು, ಗೋಣಿಚೀಲ ಓಟ, ನಿಧಾನ ಸೈಕಲ್ ಸವಾರಿ ಹಾಗೂ ಮಹಿಳೆಯರಿಗೆ ಹಗ್ಗ-ಜಗ್ಗಾಟ, ಸಂಗೀತ ಕುರ್ಚಿ , ಮಡಿಕೆ ಒಡೆಯುವುದು, ಗೋಣಿಚೀಲ ಓಟ, ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿದೆ.
ಕ್ರೀಡೋತ್ಸವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದು, ವಿವಿಧ ಗಣ್ಯರು ಭಾಗವಹಿಸುವರು ಎಂದು ಕ್ರೀಡಾಧಿಕಾರಿ ನವೀನ ಪಿ.ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *