ಮೂಡುಬಿದಿರೆ : ಹೊಸಬೆಟ್ಟು ಗ್ರಾಮ ಪಂಚಾಯತ್ನ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಮನೋಜ್ ಆಳ್ವಾರಿಸ್ ಹಾಗೂ ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಮೀನಾಕ್ಷಿ ಆಯ್ಕೆಯಾಗಿದ್ದಾರೆ.

ಈ ಪಂಚಾಯತ್ನಲ್ಲಿ ಒಟ್ಟು 11 ಸ್ಥಾನಗಳಿದ್ದು ಬಿಜೆಪಿ 5, ಕಾಂಗ್ರಸ್ 4 ಹಾಗೂ ಜೆಡಿಎಸ್ 2 ಸ್ಥಾನಗಳನ್ನು ಹೊಂದಿತ್ತು. ಸಾಮಾನ್ಯ ಪುರುಷ ಮೀಸಲಾತಿಯಡಿ ಕಾಂಗ್ರೆಸ್ ಬೆಂಬಲದೊಂದಿಗೆ ಜೆಡಿಎಸ್ ನ ಮನೋಜ್ ಆಳ್ವಾರಿಸ್ ಬಿಜೆಪಿ ಬೆಂಬಲಿತ ಯೋಗೀಶ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಸಾಮಾನ್ಯ ಮಹಿಳೆ ಮೀಸಲಾತಿಯಡಿ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಮೀನಾಕ್ಷಿ ಹಾಗೂ ಬಿಜೆಪಿ ಬೆಂಬಲಿತ ಲಕ್ಷ್ಮೀ ಪೂಜಾರ್ತಿ ನಾಮಪತ್ರ ಸಲ್ಲಿಸಿದ್ದರು. ಬಳಿಕ ನಡೆದ ಚುನಾವಣೆಯಲ್ಲಿ ಮನೋಜ್ ಆಳ್ವಾರಿಸ್ ಮತ್ತು ಮೀನಾಕ್ಷಿ ತಲಾ 6 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಕ್ಷೇತ್ರ ಶಿಕ್ಷಣಾಧಿಕಾರಿ ಗೋವಿಂದ ಮಡಿವಾಳ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

