ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು, ಕಾವಳಪಡೂರು ವಗ್ಗ ಇದರ ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದಲ್ಲಿ ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಅನುಮತಿಯ ಮೇರೆಗೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಶ್ಯಾಂ ಜಾದೂಗಾರ್, ಮತ್ತು ತಂಡದ ಇತರ ಸದಸ್ಯರಾದ ಸುಜಿತ್, ಗಣೇಶ್, ಜಯಪ್ರಕಾಶ್ ಇವರಿಂದ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ಒಂದು ಘಂಟೆಯ ಅವಧಿಯ ವಿವಿಧ ಜಾದೂ, ಹಾಡು, ಮಿಮಿಕ್ರಿ ಹಾಗೂ ಇನ್ನಿತರ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ಜರುಗಿತು.
Untitled-1 copyಈ ಕಾರ್ಯಕ್ರಮದಲ್ಲಿ ಕಾಲೇಜಿನ ಪಾಂಶುಪಾಲರಾದ ವಿಲ್ಫ್ರೆಡ್ ಪ್ರಕಾಶ್ ಡಿ’ಸೋಜಾ, ಉಪನ್ಯಾಸಕ ವರ್ಗ, ಮುಖ್ಯ ಶಿಕ್ಷಕರಾದ ಶೇಕ್ ಆದಂ ಸಾಹೇಬ್ ನೆಲ್ಯಾಡಿ, ಶಿಕ್ಷಕವೃಂದ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಹಿಂದಿ ಭಾಷಾ ಶಿಕ್ಷಕರಾದ ಶ್ರೀನಿವಾಸ ನಾಯ್ಕ ಸ್ವಾಗತಿಸಿ, ದೈಹಿಕ ಶಿಕ್ಷಕರಾದ ವೀರರಾಜೇ ಅರಸ್ ವಂದಿಸಿದರು.

By Suddi9

Leave a Reply

Your email address will not be published. Required fields are marked *