ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ರಾಯಿ ಗ್ರಾಮ ಪಂಚಾಯಿತಿನಿಂದ ಪ್ರತ್ಯೇಕಗೊಂಡ ಅರಳ ಹೊಸ ಗ್ರಾಮ ಪಂಚಾಯಿತಿಗೆ ಇಲ್ಲಿನ ಎರ್ಮಾಳು ಎಂಬಲ್ಲಿ ಎರಡೂವರೆ ಎಕರೆ ಸರ್ಕಾರಿ ಜಮೀನಿನಲ್ಲಿ ಪಂಚಾಯಿತಿ ಕಚೇರಿ ಕಟ್ಟಡ ನಿರ್ಮಿಸುವುದಕ್ಕಾಗಿ ಜಮೀನು ಮಂಜೂರಾತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಗ್ರಾ.ಪಂ.ಅಧ್ಯಕ್ಷೆ ತುಂಗಮ್ಮ ಹೇಳಿದ್ದಾರೆ.
ಅರಳ ಕಲ್ಲೇರಿಯಲ್ಲಿ ಗುರುವಾರ ನಡೆದ ಪ್ರಥಮ ಗ್ರಾಮಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇದೇ ವೇಳೆ ಇಲ್ಲಿನ ವಿದ್ಯುತ್ ಸಮಸ್ಯೆ ಮತ್ತಿತರ ವಿಷಯಗಳ ಬಗ್ಗೆ ಸ್ಥಳೀಯ ಗ್ರಾಮಸ್ಥರು ದೂರಿಕೊಂಡರು.
ಗ್ರಾ.ಪಂ.ಉಪಾಧ್ಯಕ್ಷ ಜಗದೀಶ ಆಳ್ವ, ಸ್ಥಳೀಯ ಜಿ.ಪಂ.ಸದಸ್ಯೆ ನಳಿನಿ ಬಿ.ಶೆಟ್ಟಿ, ತಾ.ಪಂ.ಸದಸ್ಯ ಎಪ್ರಿಯಂ ಸಿಕ್ವೇರ ಮತ್ತಿತರರು ಮಾತನಾಡಿದರು. ಸದಸ್ಯರಾದ ಲಕ್ಷ್ಮೀಧರ ಶೆಟ್ಟಿ, ಬಿ.ಡೊಂಬಯ, ಎಂ.ಬಿ.ಆಶ್ರಫ್, ಲಕ್ಷ್ಮೀಧರ ಪೂಜಾರಿ, ಜುಲೈಕಾ, ರಂಜನಿ ನಾಯ್ಕ್, ಜೈನಾಬ್ ಮತ್ತಿತರರು ಚರ್ಚೆ ಯಲ್ಲಿ ಪಾಲ್ಗೊಂಡರು. ಪ್ರಭಾರ ಅಭಿವೃದ್ಧಿ ಅಧಿಕಾರಿ ವೈಲೆಟ್ ಸ್ವಾಗತಿಸಿ ವಂದಿಸಿದರು.

By suddi9

Leave a Reply

Your email address will not be published. Required fields are marked *