ಮಂಗಳೂರು : ವಾಮಂಜೂರಿನಲ್ಲಿ ಆಟೋ ರಿಕ್ಷಾವೊಂದರಲ್ಲಿ ಚಾಲಕ ಶುಕ್ರವಾರ ಶವವಾಗಿ ಪತ್ತೆಯಾಗಿದ್ದು ,ಕೊಲೆ ಗೈದಿರುವ ಶಂಕೆ ವ್ಯಕ್ತವಾಗಿದೆ.
ಶವವಾಗಿ ಪತ್ತೆಯಾದ ಆಟೋ ಚಾಲಕ ಸುಲ್ತಾನ್ ಬತ್ತೇರಿಯ ಸುರೇಶ್ (28) ಎನ್ನುವವನಾಗಿದ್ದು ,ರಿಕ್ಷಾ ದ ಒಳಗೆ ನೈಲಾನ್ ಹಗ್ಗದಿಂದ ನೇಣು ಬಿಗಿದ ರೀತಿಯಲ್ಲಿ ಶವ ಪತ್ತೆಯಾಗಿದೆ. ಸ್ಥಳಕ್ಕೆ ಕಂಕನಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು ,ಶವದ ಮರಣೋತ್ತರ ಪರೀಕ್ಷೆ ನಡೆದ ಬಳಿಕ ನಿಖರ ಕಾರಣ ತಿಳಿದು ಬರಬೇಕಿದೆ.

