ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಚೆಂಡೆ ನಿವಾಸಿ ದಿವಾಕರ ಎಂಬವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾದ ರೂ.75,000 ಮೊತ್ತದ ಚೆಕ್ಕನ್ನು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ಇವರು ಇತ್ತೀಚಿಗೆ ಸಚಿವರ ಬಂಟ್ವಾಳ ಕಛೇರಿಯಲ್ಲಿ ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಬಿ.ಪದ್ಮಶೇಖರ್ ಜೈನ್, ಅಕ್ರಮ – ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲಿಯಾನ್, ಆರಾಧನಾ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪೂಜಾರಿ ಕೋರ್ಯ ಮೊದಲಾದವರು ಉಪಸ್ಥಿತರಿದ್ದರು.
