ಬಂಟ್ವಾಳ : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವುಗಳ ಆಶ್ರಯದಲ್ಲಿ ಬಂಟ್ವಾಳ ವಲಯ ಮಟ್ಟದ ಕಬಡ್ಡಿ ಪಂದ್ಯಾಟವು ಪಾಣೆಮಂಗಳೂರು-ಅಕ್ಕರಂಗಡಿ ದಾರುಲ್ ಇಸ್ಲಾಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆಯಿತು.
31 Aug Kodange Boys
ಶಾಲಾಡಳಿತ ಮಂಡಳಿ ಅಧ್ಯಕ್ಷ ಹಾಜಿ ಪಿ.ಎಸ್. ಯೂಸುಫ್ ಪಂದ್ಯಾಟ ಉದ್ಘಾಟಿಸಿದರು. ಸಂಚಾಲಕ ಹಾಜಿ ಜೆ. ಸೈಫುದ್ದೀನ್ ಉಪಸ್ಥಿತರಿದ್ದರು. ಸಿಆರ್ಪಿಗಳಾದ ಕೆಂಪಯ್ಯ ಹಾಗೂ ವೆಂಕಟ್ರಾವ್ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು. ಶಾಲಾ ಮುಖ್ಯೋಪಾಧ್ಯಾಯ ಫಕ್ರುದ್ದೀನ್ ಬಿ.ಕೆ. ಸ್ವಾಗತಿಸಿ, ದೈಹಿಕ ಶಿಕ್ಷಕ ರಾಧಾಕೃಷ್ಣ ವಂದಿಸಿದರು. ಸಹ ಶಿಕ್ಷಕ ಹಮೀದ್ ಕೆ. ಕಾರ್ಯಕ್ರಮ ನಿರೂಪಿಸಿದರು.
15 ಬಾಲಕರ ಹಾಗೂ 8 ಬಾಲಕಿಯರ ತಂಡಗಳು ಭಾಗವಹಿಸಿದ್ದ ಈ ಪಂದ್ಯಾಟದಲ್ಲಿ ಕೊಡಂಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರು ಹಾಗೂ ಬಾಲಕಿಯರು ಪ್ರಥಮ ಸ್ಥಾನ ಪಡೆದುಕೊಂಡರೆ, ದ್ವಿತೀಯ ಸ್ಥಾನವನ್ನು ಬಾಲಕರ ವಿಭಾಗದಲ್ಲಿ ಎಸ್.ವಿ.ಎಸ್. ಹಿರಿಯ ಪ್ರಾಥಮಿಕ ಶಾಲೆ ಪಾಣೆಮಂಗಳೂರು ಹಾಗೂ ಬಾಲಕಿಯರ ವಿಭಾಗದಲ್ಲಿ ಬ್ರಹ್ಮರಕೂಟ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡೆದುಕೊಂಡಿತು.

By suddi9

Leave a Reply

Your email address will not be published. Required fields are marked *