ಬಜ್ಪೆ: ಬಜ್ಪೆ ಪೊಲೀಸ್ ಠಾಣೆಯ ಸಮೀಪದ ಸಂಜೀವ ಶೆಟ್ಟಿ ಸಭಾಭವನಕ್ಕೆ ಬೆಂಕಿ ಬಿದ್ದ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಆದರೆ ಈ ಬೆಂಕಿ ಯಾಕಾಗಿ ಬಿತ್ತೆನ್ನುವುದು ನಿಗೂಢವಾಗಿ ಉಳಿದಿದ್ದು, ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಬಜ್ಪೆ ಪೊಲೀಸರು ತಿಳಿಸಿದ್ದಾರೆ.

ಸಂಜೀವ ಶೆಟ್ಟಿ ಸಭಾಭವನಕ್ಕೆ ಬೆಂಕಿ ಬಿದ್ದಿರುವ ದೃಶ್ಯ

2 bajpe 1
ಸಭಾಭವನಕ್ಕೆ ಬೆಂಕಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಬಜ್ಪೆ ಠಾಣೆಗೆ ಸುದ್ದಿ ಮುಟ್ಟಿಸಿದ್ದಾರೆ. ಬಳಿಕ ಅಗ್ನಿ ಶಾಮಕ ದಳವನ್ನು ಕರೆಸಿ ಸ್ಥಳೀಯರ ಸಹಕಾರದಿಂದ ಪೊಲೀಸರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯಿಂದ ಕಟ್ಟಡಕ್ಕೆ ಭಾಗಶಃ ಹಾನಿಯಾಗಿದ್ದು, ಅಪಾರ ಮೌಲ್ಯದ ನಷ್ಟ ಸಂಭವಿಸಿದೆ. ಆದರೆ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯುತ್ ಅವಘಡದಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ

By suddi9

Leave a Reply

Your email address will not be published. Required fields are marked *