ಸುದ್ದಿ9 ಕೈಕಂಬ(ಜ.18): ರಾಜೇಶ್ ನಾಯಕ್ ಸಾರಥ್ಯದಲ್ಲಿ ನಡೆಯುತ್ತಿರುವ ಗ್ರಾಮದೆಡೆಗೆ ಬಿಜೆಪಿ ನಡಿಗೆ ನಿನ್ನೆಗೆ ನಾಲ್ಕನೇ ದಿನಕ್ಕೆ ಕಾಲಿಟ್ಟಿತು. ಈ ಬಗ್ಗೆ ಕಲ್ಲಡ್ಕದಲ್ಲಿ ಕಾರ್ಯಕ್ರಮ ನಡೆಯಿತು. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ಯಡಿಯೂರಪ್ಪ ಸರಕಾರವಿದ್ದಾಗ ಬಡವರ ಪರವಾದ ಯೋಜನೆಗಳನ್ನು ತಂದಿದ್ದರು. ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗ ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಡವರನ್ನು ವಂಚಿಸಲಾಗುತ್ತದೆ. ಆದರೆ ಜನಪರ ಯೋಜನೆಗಳನ್ನು ಜಾರಿಗೆ ತರುವಲ್ಲಿ ಅಧಿಕಾರಯೂಢ ಕಾಂಗ್ರೆಸ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಹೇಳಿದರು.

ಕೋಟ ಶ್ರೀನಿವಾಸ ಪೂಜಾರಿಯವರು ಆಡಳಿತರೂಢ ಕಾಂಗ್ರೆಸ್ ಸರಕಾರವನ್ನು ಟೀಕಿಸಿದರು. ಭಾರತದ ಪರಿಸ್ಥಿತಿ ಎಲ್ಲಿಂದ ಎಲ್ಲಿಗೆ ತಲುಪಿತು ಎಂದು ಖೇದ ವ್ಯಕ್ತಪಡಿಸಿದ ಅವರು ವಾಜಪೇಯಿ ಸರಕಾರವಿದ್ದಾಗ ಭಾರತದ ಪರಿಸ್ಥಿತಿ ಉತ್ತಮ ಹಾಗು ಬಲಿಷ್ಠವಾಗಿತ್ತು. ಫೋಕ್ರಾನ್ನಲ್ಲಿ ಅಣುಬಾಂಬ್ ಪರೀಕ್ಷೆ ನಡೆಸಿ ದೇಶದ ಸಾಮಥ್ರ್ಯವನ್ನು ಜಗತ್ತಿಗೆ ತೋರಿಸಿಕೊಟ್ಟಿತು. ಆದರೆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ನಿಂದ ದೇಶದ ಪರಿಸ್ಥಿತಿ ಅಧೋಗತಿಗೆ ತಳ್ಳಲ್ಪಟ್ಟಿತು. ಬೆಲೆ ಏರಿಕೆ ಮಾಡಿದ್ದು ಕಾಂಗ್ರೆಸ್ ಸಾಧನೆ ಎಂದು ಟೀಕಿಸಿದರು.
ನಂತರ ಮಾತನಾಡಿದ ರಾಜೇಶ್ ನಾಯಕ್ ನನ್ನ ಬಗ್ಗೆ ಈ ಮೊದಲು ಯಾರಿಗೂ ಪರಿಚಯವಿರಲಿಲ್ಲ. ಆದರೆ ಪಕ್ಷದ ಹಿರಿಯ ಮುಖಂಡರ ಸಹಕಾರದಿಂದ ಈ ಮಟ್ಟಕ್ಕೆ ಬರುವಂತಾಯ್ತು.. ಮುಂದಿನ ದಿನಗಳಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರವನ್ನು ಸ್ಥಾಪಿಸಕಬೇಕು ಇದಕ್ಕಾಗಿ ನಾವು ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರುಕ್ಮಯ ಪೂಜಾರಿ, ಜಿ. ಆನಂದ, ಚೆನ್ನಪ್ಪ ಕೋಟ್ಯಾನ್, ರಾಮ್ದಾಸ್, ದೇವ್ದಾಸ್, ಪುರುಷ ಸಾಲ್ಯಾನ್, ದೇವಪ್ಪ ಪೂಜಾರಿ ಹಿಂದುಳಿದ ವರ್ಗದ ಆಶ್ರಫ್, ಪೃಥ್ವಿರಾಜ್ ಮತ್ತಿತರರು ಉಪಸ್ಥಿತರಿದ್ದರು





