ಕೈಕಂಬ: ಅವರ್ ಲೇಡಿ ಆಫ್ ಪೊಂಪೈ ಆಂಗ್ಲ ಮಾಧ್ಯಮ ಶಾಲೆ, ಕೈಕಂಬ ಇಲ್ಲಿ ಶಿಕ್ಷಕ ದಿನಾಚರಣೆಯನ್ನು ಆಚರಿಸಲಾಯಿತು.

ಶಾಲಾ ಸಂಚಾಲಕರಾದ ಜೆ.ಬಿ.ಸಿಕ್ವೇರಾ ಕಾರ್ಯಕ್ರಮ ಉದ್ಘಾಟಿಸಿ “ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠವಾದುದು, ಮಕ್ಕಳ ಜೀವನವನ್ನು ರೂಪಿಸುವವನೆ ಉತ್ತಮ ಶಿಕ್ಷಕ” ಎಂದು ಅಭಿಪ್ರಾಯ ಪಟ್ಟರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸುದೇಶ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಮಹೇಶ್ ಶೆಟ್ಟಿ, ಮುಖ್ಯೋಪಾಧ್ಯಾಯಿನಿಯರಾದ ಸ್ವರ್ಣಲತಾ ಹಾಗೂ ಐರಿನ್ ಮತ್ತು ಎಲ್ಲ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರಜ್ಞಾ ಸ್ವಾಗತಿಸಿ, ಕೃತಿಕ ವಂದಿಸಿದರು. ಸಮ್ರ ಕಾರ್ಯಕ್ರಮ ನಿರೂಪಿಸಿದರು. ಶಾಲಾ ನಾಯಕಿ ಮಾನಸ, ಅನುಷ್ ಸಹಕರಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.
