ಬಂಟ್ವಾಳ: ಪೌಷ್ಟಿಕ ಅಹಾರ ಸೇವೆನೆಯಿಂದ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಪ್ರಭಾ ಆರ್ ಸಾಲಿಯಾನ್ ಹೇಳಿದರು. ಅವರು ಮಹಿಳಾ ಮತ್ತು ಮಕ್ಕಳ ಇಲಾಖೆ , ಸಮಗ್ರ ಶಿಶು ಅಭಿವೃದಿ ಯೋಜನೆ ಬಂಟ್ವಾಳ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಪಂಜಿಕಲ್ಲು ಇವರ ಸಂಯುಕ್ತ ಆಶ್ರಯದಲ್ಲಿ ಪಲ್ಲಮಜಲು ಶ್ರೀರಾಮ ಭಜನಾ ಮಂದಿರದಲ್ಲಿ ನಡೆದ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದಿ ಇಲಾಖೆಯ ನಿರೂಪಣಾಧಿಕಾರಿ ನಟರಾಜ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಂಟ್ವಾಳ ಸಿ.ಡಿ.ಪಿ.ಒ ಮಲ್ಲಿಕಾ, ಪುರಸಭಾ ಸದಸ್ಯರಾದ ರಾಮಕೃಷ್ಣ ಆಳ್ವ, ಸದಾಶಿವ ಬಂಗೇರ, ಶರೀಫ್, ಜಗದೀಶ ಕುಂದರ್, ಶ್ರೀರಾಮ ಭಕ್ತಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಸೇಸಪ್ಪ ದಾಸಯ್ಯ, ಆಶಾ ಕಾರ್ಯಕರ್ತೆ ಜುಲಿಯಾನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮೇಲ್ವಿಚಾರಕಿ ಗಾಯತ್ರಿ ಕಂಬಳಿ ಸ್ವಾಗತಿಸಿ, ಅಂ.ಕಾರ್ಯಕರ್ತೆ ಉಷಾ ಎ.ಎಂ.ವಂದಿಸಿದರು.

