ಬಜ್ಪೆ: ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟೀಲು ಪದವಿಪೂರ್ವ ಕಾಲೇಜಿನ ಬಳಿಯ ಮನೆಯೊಂದರಲ್ಲಿ ನಡೆದಿದೆ. ಆತ್ಮಹತ್ಯೆಗೈದ ಮಹಿಳೆಯನ್ನು ಇಲ್ಲಿನ ನಿವಾಸಿ ನಾಗಲಕ್ಷ್ಮಿ(56) ಎಂದು ಗುರುತಿಸಲಾಗಿದೆ.
ಅವರು ಸೋಮವಾರ ಬೆಳಿಗ್ಗೆ ಮನೆಯ ಸಮೀಪದ ಹಟ್ಟಿಯ ಪಕ್ಕಾಸಿಗೆ ಸೀರೆಯಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.
ಅವರ ಪತಿ ಹರಿಶ್ಚಂದ್ರ ರಾವ್ ಅವರು ಕಟೀಲು ದೇಗುಲದಲ್ಲಿ ಅರ್ಚಕರ ಸಹಾಯಕರಾಗಿದ್ದಾರೆಂದು ತಿಳಿದುಬಂದಿದೆ. ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

By suddi9

Leave a Reply

Your email address will not be published. Required fields are marked *