ಬೆಂಗಳೂರು: ಮೇಕೆದಾಟು ಬಳಿ ಜಲವಿದ್ಯುತ್ ಯೋಜನೆಯನ್ನು ಆರಂಭಿಸುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡು ಸರ್ಕಾರ ಈ ಕುರಿತು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿರುವುದರಿಂದ ತಮಿಳುನಾಡು ಸರ್ಕಾರದ ವಿರುದ್ದ ಕಾನೂನು ಹೋರಾಟ ತಪ್ಪಿಸಲು ಯೋಜನೆಯನ್ನು ಕೈಬಿಡಲಾಗಿದೆ ಎಂದು ಡಿಕೆಶಿ ಹೇಳಿದರು.
hydropower
ಭಾನುವಾರ ಕೃಷ್ಣಗಿರಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎ. ಚೆಲ್ಲಕುಮಾರ್‌ ಪರ ಪ್ರಚಾರ ನಡೆಸಿದ ನಂತರ ಇಂಧನ ಸಚಿವ ಡಿಕೆ ಶಿವಕುಮಾರ್ ಮಾತನಾಡುತ್ತಿದ್ದರು. ಕಳೆದ ವರ್ಷ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ. ಜಯಚಂದ್ರ ಮೇಕೆದಾಟು ಯೋಜನೆಯನ್ನು ಆರಂಭಿಸುವುದಾಗಿ ತಿಳಿಸಿದರು. ಆದರೆ ಕಾವೇರಿ ಕೊಳ್ಳದಲ್ಲಿ ಯಾವುದೇ ಯೋಜನೆ ಆರಂಭಿಸುವುದು ಜಲತೀರ್ಪಿನ ಉಲ್ಲಂಘನೆಯಾಗುತ್ತದೆಯಾದ್ದರಿಂದ ಈ ಯೋಜನೆ ಕೈಬಿಡಲು ಉದ್ದೇಶಿಸಿರುವುದಾಗಿ ಡಿಕೆಶಿ ಹೇಳಿದರು. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಪ್ರಧಾನಿಗೆ ಕೂಡ ಪತ್ರ ಬರೆದು ಈ ಯೋಜನೆಯನ್ನು ನಿಲ್ಲಿಸಬೇಕೆಂದು ಆಗ್ರಹಿಸಿದ್ದರು.

By suddi9

Leave a Reply

Your email address will not be published. Required fields are marked *