ಬಂಟ್ವಾಳ: ಪಂಚಾಯಿತಿ ಪ್ರತಿನಿಧಿಗಳು ಒಗ್ಗಟ್ಟಿನಿಂದ ಹೋರಾಟ ನಡೆಸಿದರೆ ಯಾವುದೇ ಸೌಲಭ್ಯಗಳನ್ನು ಪಡೆಯಲು ಸಾಧ್ಯ ಎಂದು ಹಕ್ಕೋತ್ತಾಯ ಆಂದೋಲನದ ಜನಾರ್ದನ ಮರವಂತೆ ತಿಳಿಸಿದರು.
ದ.ಕ.ಜಿಲ್ಲಾ ಪಂಚಾಯಿತಿ ಪ್ರತಿನಿಧಿಗಳ ಒಕ್ಕೂಟ ಹಾಗೂ ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಸುಳ್ಯ, ಪುತ್ತೂರು ತಾಲೂಕು ಪಂಚಾಯಿತಿಗಳ ಒಕ್ಕೂಟ ಇದರ ಆಶ್ರಯದಲ್ಲಿ ಪಂಚಾಯಿತಿ ರಾಜ್ ಸಮಿತಿಯ ಆಶ್ರಯದಲ್ಲಿ ರಮೇಶ್ ಕುಮಾರ್ ಅವರ ವರದಿಯ ಬಗ್ಗೆ ಬೆಳಕು ಚೆಲ್ಲುವ ವಿಚಾರ ಸಂಕಿರಣ ಹಾಗೂ ಮಾಹಿತಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ದ.ಕ.ಜಿಲ್ಲಾ ಗ್ರಾಮಪಂಚಾಯಿತಿ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ದೇವದಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ಒಕ್ಕೂಟದ ಅಧ್ಯಕ್ಷ ಮುರಳೀಧರ ರೈ, ಜಿಲ್ಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸದಾನಂದ ಪೂಜಾರಿ, ರಾಜ್ಯ ಹಕ್ಕೋತ್ತಾಯ ಆಂದೋಲನದ ಕಾರ್ಯದರ್ಶಿ ಅಸ್ಗರ್ ಅಲಿ, ಮಂಗಳೂರು ತಾಲೂಕು ಒಕ್ಕೂಟದ ಅಧ್ಯಕ್ಷ ಹಮೀದ್ ಕಿನ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಬಂಟ್ವಾಳ ತಾಲೂಕು ಒಕ್ಕೂಟದ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಸ್ವಾಗತಿಸಿ, ಜಿಲ್ಲಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸದಾನಂದ ಪೂಜಾರಿ ವಂದಿಸಿದರು. ಜಿಲ್ಲಾ ಉಪಾಧ್ಯಕ್ಷ ರಜಾಕ್ ಕುಕ್ಕಾಜೆ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪಂಚಾಯಿತಿ ಪ್ರತಿನಿಧಿಗಳು ಭಾಗವಹಿಸಿದ್ದರು.
