ಬಂಟ್ವಾಳ : ಸಾರ್ವಜನಿಕ ಗಣೇಶೋತ್ಸವ ಸೇವಾ ಸಮಿತಿ ನೀರಪಾದೆ ಬಾಳ್ತಿಲ ಇದರ ಆಶ್ರಯದಲ್ಲಿ 19ನೇ ಗಣೇಶೋತ್ಸವ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರ ನೀರಪಾದೆ ಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಬಾಳ್ತಿಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 14 ವರ್ಷಗಳ ಕಾಲ ವೈದ್ಯಕೀಯ ಸೇವೆಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ಜನರಿಗೆ ನೀಡಿದ ವೈದ್ಯಾಧಿಕಾರಿ ಡಾ.ಸುಜಯ್ ಭಂಡಾರಿ ಯವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ವಿಠಲ , ಮಂಗಳೂರು ಬಜರಂಗ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ , ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಜಿತೇಂದ್ರ ಎಸ್.ಕೊಟ್ಟಾರಿ , ಶಿವಕುಮಾರ್ ಪೂಜಾರಿ ಜೋಗಿಬೆಟ್ಟು , ಗಣೇಶೋತ್ಸವ ಸೇವಾ ಸಮಿತಿ ಅಧ್ಯಕ್ಷ ದೇವದಾಸ್ ಚೆಂಡೆ , ಲಕ್ಷ್ಮೀಶ, ವಸಂತ ಸಾಲಿಯಾನ್ , ಉದಯ ಕುಮಾರ್ ಉಪಸ್ಥಿತರಿದ್ದರು. ಕೊನೆಯಲ್ಲಿ ಪ್ರತಿಭಾವಂತ ಮಕ್ಕಳಿಗೆ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

