ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆ ನಿವಾಸಿ ರೂಪಾಶ್ರೀ (21) ನಾಪತ್ತೆಯಾಗಿರುವ ಬಗ್ಗೆ ಮೂಡುಬಿದರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡುಬಿದರೆಯ ಕಚೇರಿಯೊಂದರಲ್ಲಿ ಸಹಾಯಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಈಕೆ, ಸೆ.28ರಂದು ಕೆಲಸಕ್ಕೆಂದು ಮನೆಯಿಂದ ಹೊರಟಿದ್ದು, ಕಚೇರಿಗೆ ಹೋಗಿರಲಿಲ್ಲ, ಮನೆಗೂ ಹಿಂದಿರುಗದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

98844ದ್ವಿತೀಯ ಪಿಯುಸಿ ವಿದ್ಯಾಭ್ಯಾಸವಿರುವ ಈಕೆ 5.5 ಅಡಿ ಎತ್ತರ, ಎಣ್ಣೆ ಕಪ್ಪು ಬಣ್ಣ ಹೊಂದಿದ್ದಾರೆ. ತುಳು, ಕನ್ನಡ, ಮಲೆಯಾಳಿ ಮಾತನಾಡುತ್ತಾರೆ. ಈಕೆಯ ಬಗ್ಗೆ ಸುಳಿವು ಸಿಕ್ಕಿದವರು ಪೊಲೀಸ್ ಆಯುಕ್ತರು ಅಥವಾ ಮೂಡುಬಿದರೆ ಪೊಲೀಸ್ ಠಾಣಾ ನೀರಿಕ್ಷಕರಿಗೆ (94808022314) ಮಾಹಿತಿ ನೀಡುವಂತೆ ಕೋರಲಾಗಿದೆ.

By suddi9

Leave a Reply

Your email address will not be published. Required fields are marked *