ಮೂಡುಬಿದರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಡೆಯುವ ಕನ್ನಡ ರಂಗೋತ್ಸವ 2015ಕ್ಕೆ ವಿದ್ಯಾಗಿರಿಯ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಬುಧವಾರ ಸಂಜೆ ಚಾಲನೆ ನೀಡಲಾಯಿತು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಸುವರ್ಣ ರಂಗಭೂಮಿ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ರಂಗೋತ್ಸವಕ್ಕೆ ಚಾಲನೆ ನೀಡಿದರು. ಉಡುಪಿಯ ರಂಗಭೂಮಿ ಸಂಸ್ಥೆ ಸುವರ್ಣ ರಂಗಭೂಮಿ ಸಂಭ್ರಮ ಪ್ರಯುಕ್ತ ನಡೆಯುವ ಡಾ.ಹೆಚ್ ಶಾಂತರಾಮ್ ವಿಶ್ವ ಕನ್ನಡ ನಾಟಕ ರಚನಾ ಸ್ಪರ್ಧೆ-2015 ಇದರ ಪ್ರಕಟಣೆಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯಿತು.
ಉಡುಪಿ ರಂಗಭೂಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಸುವರ್ಣ ರಂಗಭೂಮಿ ಸಮಿತಿ ಕಾರ್ಯಾಧ್ಯಕ್ಷ ಯು.ಉಪೇಂದ್ರ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಚಂದ್ರಕುತ್ಪಾಡಿ. ಕಾರ್ಯದರ್ಶಿ ರವಿರಾಜ್.ಹೆಚ್.ಪಿ, ರಂಗಭೂಮಿ ಕೋಶಾಧಿಕಾರಿ ಯು. ದುಗ್ಗಪ್ಪ, ಸದಸ್ಯರಾದ ನಂದ ಕುಮಾರ್ ಎಂ, ಎನ್.ಆರ್ ಬಲ್ಲಾಳ್, ಕಾತ್ಯಾಯಿನಿ ಕುಂಜಿಬೆಟ್ಟು, ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಮ್ ಸುಳ್ಯ ಉಪಸ್ಥಿತರಿದ್ದರು. ಡಾ.ಯೋಗೀಶ್ ಕೈರೋಡಿ ಕಾರ್ಯಕ್ರಮ ನಿರೂಪಿಸಿದರು.
