padagrahana-

ಸುದ್ದಿ9 ಬಂಟ್ವಾಳ: ಶ್ರೀ ಕ್ಷೇ.ಧ.ಗ್ರಾ.ಯೋಜನೆ ಮಡಂತ್ಯಾರು ವಲಯ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮಡಂತ್ಯಾರು ವಲಯ, ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಕುಕ್ಕಳ, ಪಿಲಾತಬೆಟ್ಟು ,ಬಡಗಕಜೆಕಾರು ಗ್ರಾಮಗಳ ಪಾನಮುಕ್ತ ನವಜೀವನ ಸಮಿತಿಯ ಪದಗ್ರಹಣ ಕಾರ್ಯಕ್ರಮ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಸಭಾಂಗಣದಲ್ಲಿ ಜರಗಿತು.
ಬಸವನಗುಡಿ ಶ್ರೀ ಬಸವೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸಂಜೀವ ಶೆಟ್ಟಿ ಮೊಗೆರೋಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು.

padagrahana-

ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಧ ರ್ಮಾಧಿಕಾರಿ  ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ದೂರದರ್ಶತ್ವದದಿಂದ ರಾಜ್ಯಾದ್ಯಂತ ಸಾವಿರಾರು ಮದ್ಯಮುಕ್ತರ ಕುಟುಂಬಗಳು ನೆಮ್ಮದಿಯ ಜೀವನ ನಡೆಸುವಂತಾಗಿದೆ. ದೃಢವಿಶ್ವಾಸದಿಂದ ದೂರೀಕರಿಸಿದಾಗ ಉತ್ತಮ ಸಮಾಜ ನಿರ್ಮಾಣ ವಾಗುತ್ತದೆ ಎಂದು ಹೇಳಿದರು. ಮಡಂತ್ಯಾರು ಜನಜಾಗೃತಿ ವೇದಿಕೆ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ವಗ್ಗ ವಲಯ ಅಧ್ಯಕ್ಷ ಪ್ರಮೋದ್ ಕುಮಾರ್, ಮಡಂತ್ಯಾರು ವಲಯಾಧ್ಯಕ್ಷ ಸಂಜೀವ ಮಡಿವಾಳ, ಮಡಂತ್ಯಾರು ವಲಯ ಮೇಲ್ವಿಚಾರಕ ರಮೇಶ್, ಕುಕ್ಕಳ ಒಕ್ಕೂಟ ಅಧ್ಯಕ್ಷ ಗೋಪಾಲ ಗೌಡ, ಸೇವಾ ಪ್ರತಿನಿ ವಸಂತಿ, ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ರಮೇಶ್ ಮೂಲ್ಯ ಉಪಸ್ಥಿತರಿದ್ದರು.
ನವಜೀವನ ಸಮಿತಿಯ ನೂತನ ಅಧ್ಯಕ್ಷರಾಗಿ ವಿಶ್ವನಾಥ, ಕಾರ್ಯದಶರ್ಿಯಾಗಿ ಸುರೇಶ್ ಆಚಾರ್ಯ, ಉಪಾಧ್ಯಕ್ಷರಾಗಿ ಸುಂದರ, ಮತ್ತಿತರ ಪದಾಕಾರಿಗಳನ್ನು ಆಯ್ಕೆ ಮಾಡಲಾಯಿತು.
ಪಿಲಾತಬೆಟ್ಟು ಸೇವಾ ಪ್ರತಿನಿ ಅಮೃತ ಎಸ್. ವಂದಿಸಿದರು. ಯೋಜನೆಯ ಸಿಬಂದಿ ತಿಮ್ಮಪ್ಪ ಕಾರ್ಯಕ್ರಮ ನಿರೂಪಿಸಿದರು.

By Suddi9

Leave a Reply

Your email address will not be published. Required fields are marked *