ಬಂಟ್ವಾಳ : ಬಂಟ್ವಾಳ : ಮುಖ್ಯ ಮಂತ್ರಿಗಳ ವಿಶೇಷ ಯೋಜನೆಯಡಿಯಲ್ಲಿ ಪುರಸಭೆಯ ಚಿಕ್ಕಯ್ಯ ಮಠ ರಸ್ತೆ ಅಭಿವೃದ್ಧಿಗೆ 9ಲಕ್ಷ ವೆಚ್ಚದ ಕಾಮಗಾರಿಯ ಶಿಲಾನ್ಯಾಸವನ್ನು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಬೂಡಾ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ , ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ , ಉಪಾಧ್ಯಕ್ಷೆ ಯಾಸ್ಮಿನ್, ಬಂ.ಬ್ಲಾಕ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಅಬ್ಬಾಸ್ ಆಲಿ, ಪುರಸಭಾ ಸದಸ್ಯರಾದ ಇಕ್ಬಾಲ್ , ಮಹಮ್ಮದ್ ನಂದರಬೆಟ್ಟು, ರಾಮಕೃಷ್ಣ ಆಳ್ವ , ಸದಾಶಿವ ಬಂಗೇರಾ, ಪ್ರವೀಣ್ ಬಿ. , ಜಗ ದೀಶ್ ಕುಂದರ್, ಗಂಗಾಧರ ಮಂಡಾಡಿ, ಪ್ರಭಾ ಸಾಲ್ಯಾನ್ , ಮಹಮ್ಮದ್ ಶರೀಫ್ , ಚಂಚಲಾಕ್ಷಿ, ಸಂಜೀವಿನಿ, ಜೆಸಿಂತಾ, ನಾಮ ನಿದರ್ೇಶಿತ ಸದಸ್ಯ ಲೋಲಾಕ್ಷ ಶೆಟ್ಟಿ , ಭೂ ಬ್ಯಾಂಕ್ ನಾಮನಿರ್ದೇಶಿತ ಸದಸ್ಯ ಪ್ರಕಾಶ್ ಬಿ ಶೆಟ್ಟಿ, ಮುಖ್ಯಾಧಿಕಾರಿ ಸುಧಾಕರ ಭಟ್ , ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೋ ಪ್ರಮುಖರಾದ ಸುಧಾಕರ್ , ಆನಂದ ಸಾಲಿಯಾನ್, ವೆಂಕಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
