ವಿಟ್ಲ: ವಿಠಲ ಪ್ರೌಢ ಶಾಲೆ ಇಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಕಳೆದ ವರ್ಷ ಹತ್ತನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಶಾಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಶ್ರೀರಕ್ಷಾ ಮತ್ತು ಕನ್ನಡ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಶೃತಿ ಇವರನ್ನು ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ನಿವೃತ್ತ ಅಧ್ಯಾಪಕ ಪದ್ಮಯ್ಯ ಗೌಡ ಭಾಗವಹಿಸಿ ಶುಭ ಹಾರೈಸಿದರು.

ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ್ ಸ್ವಾಗತಿಸಿದರು. ಶಂಕರನಾರಾಯಣ ಪ್ರಸಾದ್ ವಂದಿಸಿದರು. ಸಿ ಹೆಚ್ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು
