ಮೂಡುಬಿದರೆ: ದ.ಕ ಜಿ.ಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದರೆ ವತಿಯಿಂದ ಇಲ್ಲಿನ ಸ್ವರಾಜ್ಯ ಮೈದಾನದಲ್ಲಿ ನಡೆಯುವ ಎರಡು ದಿನಗಳ ಮೂಡುಬಿದರೆ ವಲಯ ಮಟ್ಟದ ಪ್ರಾಥಮಿಕ ಹಾಗೂ ಫ್ರೌಢ ಶಾಲಾ ಮಟ್ಟದ ಕ್ರೀಡಾಕೂಟಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.
ಕ್ರೀಡಾ ಸಚಿವ ಕೆ.ಅಭಯಚಂದ್ರ ಜೈನ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ, ಕ್ರೀಡಾಪಟುಗಳಿಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಉದ್ಯೋಗ ಮೀಸಲಾತಿ ಲಭಿಸಲಿದೆ. ಹೀಗಾಗಿ ಕ್ರೀಡೆಯ ಜೊತೆಗೆ ಕಲಿಕೆಯಲ್ಲೂ ಹೆಚ್ಚಿನ ಸಾಧ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಪ್ರತಾಪ್ ನಾಯಕ್,ತಾ. ಪಂ ಸದಸ್ಯ ಪ್ರಕಾಶ್ ನಾಯ್ಕ್, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಶಂಕರ ಭಟ್, ಉದ್ಯಮಿಗಳಾದ ಶ್ರೀಪತಿ ಭಟ್, ದಿವಾಕರ ಶೆಟ್ಟಿ ತೋಡಾರು, ಆದರ್ಶ ಶೆಟ್ಟಿ ಎಕ್ಕಾರು, ಅಶ್ವಿನಿ ಪಿರೇರಾ, ಸಂದೀಪ್ ಶೆಟ್ಟಿ, ಚಂದ್ರಹಾಸ ಸನಿಲ್, ಬೆಳುವಾಯಿ ಗ್ರಾ. ಪಂ ಅಧ್ಯಕ್ಷ ಭಾಸ್ಕರ್ ಆಚಾರ್ಯ ಭಾಗವಹಿಸಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ ಕುಮಾರ ಸ್ವಾಮಿ, ನಿಕಟ ಪೂರ್ವ ಅಧ್ಯಕ್ಷ ತುಕ್ರಪ್ಪ ಕೆಂಬಾರೆ, ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ರಮೇಶ್ ನಾಯ್ಕ್ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗೋವಿಂದ ಮಡಿವಾಳ, ನೋಡಲ್ ಅಧಿಕಾರಿ ಶಿವಾನಂದ ಕಾಯ್ಕಿಣಿ, ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಎಸ್. ನಾಗೇಶ್, ಬೆಳುವಾಯಿ ಮೈನ್ ಶಾಲೆಯ ಮುಖ್ಯ ಶಿಕ್ಷಕ ಎಂ. ಫಣಿರಾಜ್, ಫ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗುರು ಎಂ.ಪಿ, ಮತ್ತಿತರು ಉಪಸ್ಥಿತರಿದ್ದರು. ಆಳ್ವಾಸ್ ನ ಕ್ರೀಡಾ ಪಟುಗಳು ಕ್ರೀಡಾ ಜ್ಯೋತಿ ಬೆಳಗಿದರು. ನಾಗೇಶ್ ಸ್ವಾಗತಿಸಿದರು. ಮುನಿರಾಜ ರೆಂಜಾಳ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮಕ್ಕೂ ಮುನ್ನ ಆಕರ್ಷಕ ಪಥಸಂಚಲನ ನಡೆಯಿತು.

