ಮೂಡುಬಿದರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ಮಂಗಳೂರು ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳಿಗೆ ನಡೆದ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಮಂಗಳೂರು ನಗರ ಹಾಗೂ ಬಾಲಕಿಯರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಪ್ರಥಮ ಸ್ಥಾನಿಯಾಗಿದೆ.
ಬಾಲಕರ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಹಾಗೂ ಬಾಲಕಿರ ವಿಭಾಗದಲ್ಲಿ ಪುತ್ತೂರು ತಾಲೂಕು ದ್ವಿತೀಯ ಸ್ಥಾನವನ್ನು ಪಡೆಯಿತು. ಪಂದ್ಯಾಟದಲ್ಲಿ 6 ತಾಲೂಕಿನ ಬಾಲಕರ ಹಾಗೂ ಬಾಲಕಿಯರ 6 ತಂಡಗಳು ಭಾಗವಹಿಸಿದ್ದವು.

ಸಮಾರೋಪ ಸಮಾರಂಭದದ ಅಧ್ಯಕ್ಷತೆಯನ್ನು ಪ.ಪೂ. ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್ ಭಟ್ ವಹಿಸಿದ್ದರು.
ಕಾಲೇಜಿನ ಹಳೆ ವಿದ್ಯಾರ್ಥಿ ಶಾನ್ ಶೆಟ್ಟಿ ಬಹುಮಾನ ವಿತರಿಸಿದರು. ಕಾಲೇಜಿನ ವಿದ್ಯಾರ್ಥಿನಿ ಕ್ಷೇಮಪಾಲನಾ ಅಧಿಕಾರಿ ಹರೀಶ್ ಉಪಸ್ಥಿತರಿದ್ದರು.
ಉದ್ಘಾಟನೆ: ಉದ್ಯಮಿ ರಾಘವೇಂದ್ರ ಕಾಮತ್ ಪಂದ್ಯಾಟವನ್ನು ಉದ್ಘಾಟಿಸಿದರು. ಕ್ರೀಡಾ ಸಚಿವ ಕೆ.ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು. ಪದವಿ ಕಾಲೇಜಿನ ಪ್ರಾಂಶುಪಾಲ ಹೆಚ್.ಚಂದ್ರಶೇಖರ ದೀಕ್ಷಿತ್, ಪ.ಪೂ. ಕಾಲೇಜಿನ ಪ್ರಾಂಶುಪಾಲ ಪ್ರೊ.ರಮೇಶ್ ಭಟ್ ಉಪಸ್ಥಿತರಿದ್ದರು.
ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ರಾಜ್ ಪ್ರಸಾದ್ ಪಂದ್ಯಾಟವನ್ನು ಸಂಯೋಜಿಸಿದರು.
