ಮೂಡುಬಿದರೆ: ಕಲ್ಲುಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಳಿಯೂರು ಗ್ರಾಮದಲ್ಲಿ ನಡೆದಿದೆ.
ಅಳಿಯೂರನ ಮುಗ್ರೋಡಿ ಕಲ್ಲುಕೋರೆಯ ಕಾರ್ಮಿಕ ಕೇರಳ ಮೂಲದ ರವಿ(68)ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಟಿ.ಬಿ ಕಾಯಿಲೆಯಿಂದ ಬಳಲುತ್ತಿದ್ದ ಇವರು ಹಲವು ಸಮಯಗಳಿಂದ ಚಿಕಿತ್ಸೆ ಮಾಡಿದರು ಗುಣಮುಖವಾಗದಿದ್ದುರಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರೆನ್ನಲಾಗಿದೆ. ಭಾನುವಾರ ರಾತ್ರಿ ಕ್ರಷರ್ ಆವರಣದಲ್ಲಿರುವ ಕಾರ್ಮಿಕರು ಉಳಿದುಕೊಳ್ಳುವ ಕೋಣೆಯಲ್ಲಿ ಫ್ಯಾನಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೂಡುಬಿದರೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

By suddi9

Leave a Reply

Your email address will not be published. Required fields are marked *