ಬಂಟ್ವಾಳ; ದಲಿತ ಮಹಿಳೆಯರನ್ನು ನಿಂದಿಸಿದ ಬಾಬಾರಾಮ್ ದೇವ್ ವಿರುದ್ದ ಪ್ರಕರಣ ದಾಖಲಿಸಬೇಕೆಂದು ಒತ್ತಾಯಿಸಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಭಾಗದ ಆಶ್ರಯದಲ್ಲಿ ಶನಿವಾರ ಬಿ.ಸಿ.ರೋಡಿನ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.


ಈ ಸಂದರ್ಭದಲ್ಲಿ ಪಕ್ಷದ ಪ.ಪಂ.ಘಟಕದ ಜಿಲ್ಲಾಧ್ಯಕ್ಷ ಪದ್ಮನಾಭ ನರಿಂಗಾನ, ಬ್ಲಾಕ್ ಅಧ್ಯಕ್ಷರುಗಳಾದ ಮಾಯಿಲಪ್ಪ ಸಾಲಿಯಾನ್, ಅಬ್ಬಾಸ್ ಆಲಿ, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮಹಮ್ಮದ್, ಕಾಂಗ್ರೇಸ್ ವಕ್ತಾರ ಹರಿಕೃಷ್ಣ ಬಂಟ್ವಾಳ, ಪುರಸಭಾಧ್ಯಕ್ಷೆ ವಸಂತಿ ಚಂದಪ್ಪ, ಪ್ರಮುಖರಾದ ಪದ್ಮಶೇಖರ ಜೈನ್, ಜನಾರ್ದನ ಚಂಡ್ತಿಮಾರ್, ಸದಾಶಿವ ಬಂಗೇರಾ ಮೊದಲಾದವರು ಉಪಸ್ಥಿತರಿದ್ದರು.



