ಬಂಟ್ವಾಳ : ಗಿರಿಜನ ಉಪಯೋಜನೆ ಹಾಗೂ 2015-16ನೇ ಸಾಲಿನ ವಿಶೇಷ ಘಟಕ ಯೋಜನೆಯಡಿಯಲ್ಲಿ ಕುಕ್ಕಿಪ್ಪಾಡಿ-ಹಲಾಯಿ ಪರಿಶಿಷ್ಟ ಜಾತಿ ಕಾಲನಿಗೆ ರೂ.15ಲಕ್ಷ ವೆಚ್ಚದ ಕಾಮಗಾರಿಯ ಶಿಲಾನ್ಯಾಸವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೆರವೇರಿಸಿದರು.
ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ , ಬೂಡಾ ಅಧ್ಯಕ್ಷ ಪಿಯೂಸ್ ಎಲ್ ರೋಡ್ರಿಗಸ್, ತಾ.ಪಂ.ಸದಸ್ಯ ಪದ್ಮಶೇಖರ್ ಜೈನ್ , ಎಫ್ರೆಂ ಸಿಕ್ವೇರಾ, ಬಂ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಇಂಜಿನಿಯರುಗಳಾದ ಅರುಣ್ ಪ್ರಕಾಶ್ ಡಿಸೋಜ, ಗೋಪಾಲ್, ಪ್ರೀತಂ, ಪ್ರಮುಖರಾದ ಜಗದೀಶ್ ಕೊಯಿಲ, ದೇವಪ್ಪ ಕರ್ಕೇರಾ, ತಿಮ್ಮಪ್ಪ ಕುಕ್ಕಿಪ್ಪಾಡಿ, ಪ್ರಭಾಕರ ಪ್ರಭು ಉಪಸ್ಥಿತರಿದ್ದರು.
