ಬಂಟ್ವಾಳ: ಜಿಲ್ಲೆಯಲ್ಲಿ ಮಾದರಿ ಎಂಬಂತೆ ಬಂಟ್ವಾಳ ತಾಲೂಕು ಪಂಚಾಯತ್ ಸೋಮವಾರ ಆಯೋಜಿಸಿದ್ದ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಕ್ರೀಡಾಕೂಟದಲ್ಲಿ ಮಾಣಿ ಜಿ.ಪಂ ಕ್ಷೇತ್ರ ಸಮಗ್ರ ಪ್ರಶಸ್ತಿಯನ್ನು ಪಡೆದಿದೆ
ತಾಲೂಕಿನ 9 ಜಿ.ಪಂ. ಕ್ಷೇತ್ರ ವ್ಯಾಪ್ತಿಯ ಜನಪ್ರತಿನಿಧಿಗಳು, ಅಧಿಕಾರಿಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು , ಒಟ್ಟು 62 ಅಂಕಗಳನ್ನು ಗಳಿಸುವುದರೊಂದಿಗೆ ಜಿ.ಪಂ. ಸದಸ್ಯ ಚೆನ್ನಪ್ಪ ಕೋಟ್ಯಾನ್‍ರವರ ನೇತೃತ್ವದ ಮಾಣಿ ಜಿ.ಪಂ. ಕ್ಷೇತ್ರ ಸಮಗ್ರ ಪ್ರಶಸ್ತಿಯನ್ನು ಬಗಲಿಗೆ ಹಾಕಿ ಕೊಂಡಿದೆ.
IMG_9507ಜಿ.ಪಂ.ಕ್ಷೇತ್ರವ್ಯಾಪ್ತಿಯ ಜಿ.ಪಂ. ಸದಸ್ಯರ ನೇತೃತ್ವದಲ್ಲಿ ನಡೆದ ಈ ಕ್ರೀಡಾಕೂಟದಲ್ಲಿ ಜಾತಿ,ಮತ, ಪಕ್ಷ ,ಬೇಧ, ಮರೆತು ತಾ.ಪಂ.,ಗ್ರಾ.ಪಂ. ಸದಸ್ಯರುಗಳು ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು. ಬೆಳಿಗ್ಗೆ ಜಿ.ಪಂ. ಅಧ್ಯಕ್ಷೆ ಆಶಾತಿಮ್ಮಪ್ಪ ಗೌಡರವರು ಧ್ವಜಾರೋಹಣಗೈದರೆ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ದೀಪ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಸಂಜೆಯ ವೇಳೆ ಸಂಸದ ನಳಿನ್ ಕುಮಾರ್ ಕಟೀಲ್ , ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಶಕುಂತಲಾ ಶೆಟ್ಟಿ ಹಾಗೂ ತುಳು ಅಕಾಡೆಮಿಯ ಮಾಜಿ ಅಧ್ಯಕ್ಷ ಉಮಾನಾಥ ಕೋಟ್ಯಾನ್ ಅವರು ಭಾಗವಹಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಳಗ್ಗೆ 8.30ಕ್ಕೆ ಮೈದಾನಕ್ಕೆ ಆಗಮಿಸಿದ್ದ ಅಧಿಕಾರಿಗಳು ರಾತ್ರಿ 8.30ರ ವರೆಗೂ ಬೀಡು ಬಿಟ್ಟಿದ್ದು, ಎಲ್ಲಾ ಪಂದ್ಯಾಟಗಳನ್ನು ಮುಗಿಸಿ ತೆರಳಿದ್ದರು. ತಾ.ಪಂ. ಅಧ್ಯಕ್ಷ ಯಶವಂತ ಡಿ. ಅವರು ಇದರ ಮೇಲುಸ್ತುವಾರಿ ವಹಿಸಿ ತಾನು ಕೀಡಾಪಟುವಾಗಿ ಮಿಂಚಿದರು. ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದ, ಶಿಕ್ಷಣಾಧಿಕಾರಿ ಶೇಷಶಯನಕಾರಿಂಜ, ಯುವಜನಸೇವಾ ಕ್ರೀಡಾಧಿಕಾರಿ ನವೀನ್ ಅವರ ನೇತೃತ್ವದಲ್ಲಿ ತಾಲೂಕಿನ ದೈಹಿಕ ಶಿಕ್ಷಕರು ಪಂದ್ಯಾವಳಿಯನ್ನು ನಡೆಸಿಕೊಟ್ಟರು.

By Suddi9

Leave a Reply

Your email address will not be published. Required fields are marked *