ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ರಾಷ್ಟ್ರೀಯ ಹೆದ್ದಾರಿ ಪ್ರಮುಖ ವೃತ್ತದ ಬಳಿ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ರೂ.1.14ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಟ್ರೀ ಪಾರ್ಕ್ ಸಮೀಪದಲ್ಲೇ ಇಲ್ಲಿನ ಪುಸಭೆ ವತಿಯಿಂದ ಪ್ರತಿದಿನ ಸುರಿಯಲಾಗುತ್ತಿರುವ ತ್ಯಾಜ್ಯ ರಾಶಿಯು ವಾಹನ ಸವಾರರು ಮತ್ತು ಪಾದಚಾರಿಗಳಿಗೆ ಪರಿಸರದಲ್ಲಿ ಮೂಗು ಮುಚ್ಚಿಕೊಂಡೇ ಸಾಗುವಂತೆ ಮಾಡಿದೆ.

