ಮುತ್ತೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಮುತ್ತೂರಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ರಕ್ಷಿತಾ, ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಮೂಡುಬಿದಿರೆ ಸ್ವರಾಜ್ಯ ಮೈದಾನದಲ್ಲಿ ನಡೆದ ದ.ಕ. ಜಿಲ್ಲಾಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಪೋಲ್‍ವಾಲ್ಟ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.

